ಸೋಮವಾರ, ಮಾರ್ಚ್ 9, 2026

daasa sahitya siri intro talk

ದಾಸಪಂಥವನ್ನು ಸ್ವೀಕರಿಸಿ, ಗಾನ ನೃತ್ಯಗಳ ಮೂಲಕ

ಭಗವಂತನನ್ನು ಆರಾಧಿಸಿದ, ದಾಸರು ಎಂದು ಸಾಮಾನ್ಯವಾಗಿ

ನಾವು ಸಂಭೋದಿಸುವ ಮಹಾನುಭಾವರು ಅನೇಕರಿದ್ದಾರೆ.

ಅದರಲ್ಲಿ ಪ್ರಮುಖರು ಶ್ರೀ ಪುರಂದರ ದಾಸರು.

ಈ ದಾಸರು ರಚಿಸಿದ ಭಕ್ತಿಗೀತೆಗಳನ್ನು  ನಾವು

‘ದಾಸರಪದಗಳು’ ಎಂದೆವು. ಕೇಳಿದವರಲ್ಲಿ ಭಕ್ತಿ

ಭಾವನೆಯನ್ನು ಉದ್ದೀಪನಗೊಳಿಸುವುದು ದಾಸರಪದಗಳ

ಉದ್ದೇಶ್ಯ. ಬಹುತೇಕ ದಾಸರಪದಗಳು ಬಹಳ ಸರಳವಾಗಿದ್ದು

ಅವುಗಳಿಗೆ ಅರ್ಥವಿವರಣೆ ಬೇಕಿಲ್ಲ. ಆದರೆ ಕೆಲವುಪದಗಳ

ರಚನೆ ಆಕರ್ಷಣೀಯವಾಗಿದ್ದರೂ ಮೇಲ್ನೋಟಕ್ಕೆ ಅವುಗಳ

ತಲೆಬುಡ ತಿಳಿಯುವುದಿಲ್ಲ. ತಿಳಿದವರು ಕೆಲವರು ತಮಗೆ

ತಿಳಿದಂತೆ ಆ ಪದಗಳಿಗೆ ಅರ್ಥ ತಿಳಿಸಿದ್ದಾರೆ. ನಮಗೆ

ಎಟಕುವಂತಿರುವ ಕೆಲವು ದಾಸರಪದಗಳ ಗಾಯನ,

ಅವುಗಳ ವ್ಯಾಖ್ಯಾನ ಒಂದೆಡೆ ದೊರೆಯುವಂತೆ

ಮಾಡುವುದು ನಮ್ಮ ಈ ಯು ಟ್ಯೂಬ್ ವಿಡಿಯೋಗಳ

ಉದ್ದೇಶ್ಯ. ಇಲ್ಲಿನ ಗಾಯನ ಬೃಂದಾ ರಾವ್ ಅವರದು,

ವಿವರಣೆ ರಘುನಂದನ ಎಂಬ ಹೆಸರಿನ ನನ್ನದು.

ತಾವು ಕೇಳಿದರೆ ಸಂತೋಷ, ತಮ್ಮ ಅನಿಸಿಕೆಯನ್ನು

ತಿಳಿಸಿದರೆ ಹೆಚ್ಚಿನ ಸಂತೋಷ. 



sound tools audio joiner



ದಾಸರ ಪದಗಳು ಅಥವಾ ರಚನೆಗಳು ಐದುಸಾವಿರವೆಂದು ಕೆಲವರ ಮತ,

ಐವತ್ತುಸಾವಿರವೆಂದು ಕೆಲವರ ಎಣಿಕೆ, ಐದು ಲಕ್ಷವೆನ್ನುವರು ಮತ್ತೆ ಕೆಲವರು. ಖಚಿತವಾಗಿ

ತಿಳಿಯದು. ಪದಗಳ ಸಾಹಿತ್ಯವೂ ಹಾಗೆಯೇ. ಭಾವ ಹೆಚ್ಚುಕಡಿಮೆ ಒಂದೇ ಇದ್ದರೂ

ಪದಗಳ ಉಪಯೋಗದಲ್ಲಿ ಅಂದರೆ ಬರಹದಲ್ಲಿ ಮತ್ತು ಹಾಡುಗಾರಿಕೆಯಲ್ಲಿ ಸಹ ಅನೇಕ

ವತ್ಯಾಸಗಳು ಕಾಣಬರುತ್ತವೆ. ದಾಸರ ಕೆಲವು ಪದಗಳು ಬಹಳ ಸರಳ. ಅದಕ್ಕೆ ಯಾರೂ

ಅರ್ಥ ತಿಳಿಸಬೇಕಿಲ್ಲ. ಕೆಲವು ಪದಗಳ ತಲೆ ಬುಡ ತಿಳಿಯುವುದಿಲ್ಲ. ಅಂಥ ರಚನೆಗಳಿಗೆ

ತಿಳಿದವರು ಕೆಲವರು ನೀಡಿರುವ  ಅರ್ಥಗಳು ಕೂಡ ಅನೇಕ. ನಮಗೆ ಎಟಕುವಂತಿರುವ

ಕೆಲವು ದಾಸರಪದಗಳ ಗಾಯನ, ಅವುಗಳ ವ್ಯಾಖ್ಯಾನ ಒಂದೆಡೆ ದೊರೆಯುವಂತೆ ಮಾಡುವುದು

ನಮ್ಮ ಈ ಯು ಟ್ಯೂಬ್ ವಿಡಿಯೋಗಳ ಉದ್ದೇಶ್ಯ. ಇಲ್ಲಿನ ಗಾಯನ ಬೃಂದಾ ರಾವ್ ಅವರದು,

ವಿವರಣೆ ರಘುನಂದನ ಎಂಬ ಹೆಸರಿನ ನನ್ನದು. ತಾವು ಕೇಳಿದರೆ ಸಂತೋಷ, ತಮ್ಮ

ಅನಿಸಿಕೆಯನ್ನು ತಿಳಿಸಿದರೆ ಹೆಚ್ಚಿನ ಸಂತೋಷ.